ನವದೆಹಲಿ: ತ್ರಿಪುರಾ, ಮೇಘಾಲಯ, ನಾಗಾಲ್ಯಾಂಡ್ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರು, ತ್ರಿಪುರಾದಲ್ಲಿ ಫೆಬ್ರವರಿ 16ರಂದು ಚುನಾವಣೆ ನಡೆಯಲಿದ್ದು, ತ್ರಿಪುರಾದ 60 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ತಿಳಿಸಿದರು.
ಮೇಘಾಲಯದಲ್ಲಿ 60 ಸ್ಥಾನಗಳಿಗೆ ಫೆಬ್ರವರಿ 27ರಂದು ಮತದಾನ ನಡೆಯಲಿದೆ. ನಾಗಾಲ್ಯಾಂಡ್ ನ 60 ಸ್ಥಾನಗಳಿಗೂ ಫೆ.27ರಂದೇ ಚುನಾವಣೆ ನಡೆಯಲಿದೆ ಎಂದು ಹೇಳಿದರು.
ಮಾರ್ಚ್ 2ರಂದು ಮೂರು ರಾಜ್ಯಗಳ ಫಲಿತಾಂಶ ಪ್ರಕಟಗೊಳ್ಳಲಿದೆ.