HomeKarnatakaBIG NEWS: ಕೆಜಿಎಫ್ ಬಾಬುಗೆ ED ಶಾಕ್

BIG NEWS: ಕೆಜಿಎಫ್ ಬಾಬುಗೆ ED ಶಾಕ್

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕೋಟಿ ವೀರ ಕೆಜಿಎಫ್ ಬಾಬುಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ.

ಕೆಜಿಎಫ್ ಬಾಬುಗೆ ನಾಳೆ ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಮೇ ತಿಂಗಳಲ್ಲಿ ಕೆಜಿಎಫ್ ಬಾಬು ಅವರ ವಸಂತನಗರದ ನಿವಾಸದ ಮೇಲೆ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಬಾಬು ಒಡೆತನದ 7 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಅಕ್ರಮ ಹಣ ವರ್ಗಾವಣೆ ಬಗ್ಗೆ ಕೆಲ ಸಾಕ್ಷ್ಯಗಳು ಲಭ್ಯವಾಗಿರುವ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಇದೀಗ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular