ಹಾವೇರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಅಖಾಡ ರಂಗೇರಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ ಅವರಿಗೆ ತಾಕತ್ತಿದ್ದರೆ ಕಮಿಷನ್ ವಿರುದ್ಧ ತನಿಖೆ ನಡೆಸಲಿ ಎಂದು ಸವಾಲು ಹಾಕಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಿಎಂ ಬೊಮ್ಮಾಯಿ ಅವರು ಮಾತೆತ್ತಿದರೆ ಧಮ್, ತಾಕತ್ತಿನ ಬಗ್ಗೆ ಮಾತನಾಡುತ್ತಾರೆ. ಧಮ್, ತಾಕತ್ತಿದ್ದರೆ 40% ಕಮಿಷನ್ ಬಗ್ಗೆ ತನಿಖೆ ನಡೆಸಲಿ ಎಂದು ಹೇಳಿದರು.
ಇದೇ ವೇಳೆ ಸಚಿವ ಬಿ.ಸಿ. ಪಾಟೀಲ್ ವಿರುದ್ಧವೂ ಗುಡುಗಿದ ಸಿದ್ದರಾಮಯ್ಯ, ಜನರ ಮತ ಧಿಕ್ಕರಿಸಿ ಬಿಜೆಪಿಗೆ ಹೋದವರಿಗೆ ನಾಚಿಕೆಯಾಗಬೇಕು. ನೀವೇ ಆಯ್ಕೆ ಮಾಡಿದ ಹಿರೇಕೆರೂರು ಶಾಸಕರು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗಿ ನಾಟಕ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.