ಸದ್ದಿಲ್ಲದೆ ಬೆಂಗಳೂರು ಯುಜಿಸಿ ಕಚೇರಿ ದೆಹಲಿಗೆ ಸ್ಥಳಾಂತರ

ಬೆಂಗಳೂರು: ಬೆಂಗಳೂರಿನಲ್ಲಿದ್ದ ವಿಶ್ವವಿದ್ಯಾಲಯ ಧನಸಹಾಯ ಆಯೋಗದ(UGC) ಪ್ರಾದೇಶಿಕ ಕಚೇರಿಯನ್ನು ಸದ್ದಿಲ್ಲದೆ ದೆಹಲಿಗೆ ಸ್ಥಳಾಂತರ ಮಾಡಲಾಗಿದ್ದು, ಇದರಿಂದಾಗಿ ಪ್ರಮುಖ ಉನ್ನತ ಶಿಕ್ಷಣ ಕಚೇರಿ ರಾಜ್ಯಕ್ಕೆ ನಷ್ಟವಾಗಿದೆ.

ಬೆಂಗಳೂರು ಮಾತ್ರವಲ್ಲದೇ ದೇಶದ ವಿವಿಧ ರಾಜ್ಯಗಳಲ್ಲಿದ್ದ 6 ಪ್ರಾದೇಶಿಕ ಕಚೇರಿಗಳನ್ನು ಯುಜಿಸಿ ದೆಹಲಿಗೆ ವರ್ಗಾವಣೆ ಮಾಡಿಕೊಂಡಿದೆ. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ ನಲ್ಲಿದ್ದ ಯುಜಿಸಿ ಕಚೇರಿಯನ್ನು ಕೆಲವು ದಿನಗಳ ಹಿಂದೆಯೇ ಮುಚ್ಚಲಾಗಿದ್ದು, ದೆಹಲಿಗೆ ಸ್ಥಳಾಂತರಿಸಲಾಗಿದೆ. ಈ ಮೂಲಕ ರಾಜ್ಯಕ್ಕೆ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಮುಖ ಕಚೇರಿಯೊಂದು ನಷ್ಟವಾದಂತಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read