ಗಣರಾಜ್ಯೋತ್ಸವ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಇಂದಿನಿಂದ ಫಲ ಪುಷ್ಪ ಪ್ರದರ್ಶನ ಏರ್ಪಡಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದರ ಉದ್ಘಾಟನೆ ನೆರವೇರಿಸಲಿದ್ದಾರೆ.
ಹತ್ತು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ದೇಶದ ವಿವಿಧ ಭಾಗಗಳ ಫಲಪುಷ್ಪವನ್ನು ಸಹ ಪ್ರದರ್ಶಿಸಲಾಗುತ್ತದೆ.
ಅಲ್ಲದೇ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಾವಕಾಶ ನೀಡಲಾಗುತ್ತಿದ್ದು, ಈ ಬಾರಿ 15 ರಿಂದ 20 ಲಕ್ಷ ಮಂದಿ ಫಲ ಪುಷ್ಪ ಪ್ರದರ್ಶನದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.