
ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಹೆಚ್.ವಿಶ್ವನಾಥ್ ಸಿಎಂ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದ ಹೆಚ್.ವಿಶ್ವನಾಥ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು.
ಕಾಂಗ್ರೆಸ್ ಸೇರ್ಪಡೆ ಘೋಷಣೆ ಬಳಿಕ ಇದೀಗ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗುವ ಮೂಲಕ ಅಚ್ಚರಿಗೆ ಕಾರಣರಾಗಿದ್ದಾರೆ. ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ನಡೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

