
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಎನ್ ಐ ಎ ಮೂವರು ಆರೋಪಿಗಳನ್ನು ಬಂಧಿಸಿದೆ. ಮತ್ತಿಬ್ಬರು ಆರೋಪಿಗಳ ಬಂಧನಕ್ಕೆ ತೀವ್ರ ಶೋಧ ನಡೆಸಿದ್ದು, ಆರೋಪಿಗಳಾದ ಷರೀಫ್ ಹಾಗೂ ಮಸೂದ್ ಕೆ.ಎ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ.
ಆರೋಪಿ ಷರೀಫ್ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತ್ತಾಲೂಕಿನ ಕೊಡಾಜೆಯ ಕೊಡಾಜೆ ಅದ್ದ ಅವರ ಪುತ್ರ. ಇನ್ನು ಮಸೂದ್ ನೆಕ್ಕಿಲಾಡಿಯ ಅಗ್ನಾಡಿ ಹೌಸ್ ಅಬೂಬಕ್ಕರ್ ಅವರ ಮಗ ಎಂದು ತಿಳಿದುಬಂದಿದೆ. ಆರೋಪಿಗಳ ಸುಳಿವು ಸಿಕ್ಕಲ್ಲಿ ಬೆಂಗಳೂರಿನ ದಮ್ಮಲೂರು ಎನ್ ಐ ಎ ಎಸ್ ಪಿ ಗೆ ಮಾಹಿತಿ ನೀಡುವಂತೆ ತಿಳಿಸಿದೆ.

