HomeKarnatakaBIG NEWS: ರಾಜ್ಯ BJP ನಾಯಕರ ಸಭೆಗೆ ಮಾಜಿ ಸಿಎಂ BSYಗೆ ಇಲ್ಲ ಆಹ್ವಾನ....!

BIG NEWS: ರಾಜ್ಯ BJP ನಾಯಕರ ಸಭೆಗೆ ಮಾಜಿ ಸಿಎಂ BSYಗೆ ಇಲ್ಲ ಆಹ್ವಾನ….!

ಬೆಂಗಳೂರು: ವಿಧಾನಸಭಾ ಚುನಾವಣೆಗೆ ತಯಾರಿ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಹಿರಿಯ ನಾಯಕರ ಸಭೆ ನಡೆಯುತ್ತಿದ್ದು, ಸಭೆಗೆ ರಾಷ್ಟ್ರೀಯ ಚುನಾವಣಾ ಸಮಿತಿ ಸದಸ್ಯ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿಲ್ಲ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯ ನಾಯಕರ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿಎಂ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಭಾಗವಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಭೆಯಲ್ಲಿ ಚುನಾವಣಾ ತಂತ್ರಗಾರಿಕೆ, ಪ್ರಚಾರ, ಪಕ್ಷ ಸಂಘಟನೆ, ಪ್ರಣಾಳಿಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಆದರೆ ಈ ಸಭೆಗೆ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿಲ್ಲ ಎಂದು ತಿಳಿದುಬಂದಿದೆ. ಎರಡು ದಿನಗಳ ಹಿಂದೆಯೇ ರಾಜ್ಯ ಬಿಜೆಪಿ ನಾಯಕರಿಗೆ ಸಭೆಗೆ ಆಹ್ವಾನಿಸಲಾಗಿದೆಯಾದರೂ ಯಡಿಯೂರಪ್ಪನವರಿಗೆ ಆಹ್ವಾನ ನೀಡಿಲ್ಲ ಎನ್ನಲಾಗಿದೆ. ಬಿಜೆಪಿ ನಾಯಕರು ಯಡಿಯೂರಪ್ಪನವರನ್ನು ಕಡೆಗಣಿಸುತ್ತಿದ್ದಾರೆ ಎಂದು ಬಿ ಎಸ್ ವೈ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular