ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
240 ಸಾಕ್ಷಿಗಳ ಹೇಳಿಕೆ ಇರುವ 1500 ಪುಟಗಳ ಚಾರ್ಜ್ ಶೀಟ್ ಅನ್ನು ಎನ್ಐಎ ಅಧಿಕಾರಿಗಳು ಸಲ್ಲಿಸಿದ್ದಾರೆ. ಒಟ್ಟು 20 ಆರೋಪಿಗಳ ಮೇಲೆ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಇದುವರೆಗೆ 14 ಆರೋಪಿಗಳ ಬಂಧಿಸಲಾಗಿದೆ. 6 ಮಂದಿ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಸುಳ್ಯದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ 6 ಜನ ಆರೋಪಿಗಳ ಪತ್ತೆಗಾಗಿ ಒಟ್ಟು 19 ಲಕ್ಷ ಬಹುಮಾನವನ್ನು ಎನ್ಐಎ ಘೋಷಿಸಿದೆ.