HomeKarnatakaತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ 4 ನೇ ವರ್ಷದ ಪುಣ್ಯಸ್ಮರಣೆ

ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ 4 ನೇ ವರ್ಷದ ಪುಣ್ಯಸ್ಮರಣೆ

ತುಮಕೂರು: ಇಂದು ಶಿವಕುಮಾರ ಸ್ವಾಮೀಜಿಗಳ ನಾಲ್ಕನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದ್ದು, ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು.

ಮಠದಲ್ಲಿ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ, ವಿಶೇಷ ಪೂಜಾ ಕಾರ್ಯ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಬೆಳ್ಳಿ ರಥದಲ್ಲಿ ಪೂಜ್ಯರ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆಯಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು, ವಿವಿಧ ಮಠಗಳ ಮಠಾಧೀಶರು, ಕಲಾತಂಡಗಳು ಭಾಗಿಯಾಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗ್ಗೆ 10 ಗಂಟೆಗೆ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು ಭಾಗಿಯಾಗಲಿದ್ದಾರೆ. ಪುಣ್ಯಸ್ಮರಣೆಯಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular