HomeKarnatakaSSC ಪರೀಕ್ಷೆ ಬರೆಯುವ 10 ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

SSC ಪರೀಕ್ಷೆ ಬರೆಯುವ 10 ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಸಿಬ್ಬಂದಿ ನೇಮಕಾತಿ ಆಯೋಗ (SSC) 11,409 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಏಪ್ರಿಲ್ ನಲ್ಲಿ ಪರೀಕ್ಷೆ ನಡೆಸಲಿದ್ದು, ಇದೇ ಮೊದಲ ಬಾರಿಗೆ ಕನ್ನಡ, ಕೊಂಕಣಿ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

11,409 ಹುದ್ದೆಗಳ ಪೈಕಿ 10,880 ಹುದ್ದೆಗಳು ಮಲ್ಟಿ ಟಾಸ್ಕಿಂಗ್ ಸ್ಟಾಪ್ ಆಗಿದ್ದು, 529 ಹವಾಲ್ದಾರ್ ಹುದ್ದೆಗಳಾಗಿವೆ. ಕನ್ನಡದಲ್ಲಿ ಪರೀಕ್ಷೆ ಬರೆಯಲು ಇಚ್ಚಿಸುವವರು 08 ಕೋಡ್ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹತ್ತನೇ ತರಗತಿ ಉತ್ತೀರ್ಣರಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಫೆಬ್ರವರಿ 17 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ರಾಜ್ಯದ ಬೆಂಗಳೂರು, ಶಿವಮೊಗ್ಗ, ಬೆಳಗಾವಿ, ಹುಬ್ಬಳ್ಳಿ, ಕಲಬುರ್ಗಿ, ಮಂಗಳೂರು, ಮೈಸೂರು ಹಾಗೂ ಉಡುಪಿ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ https://ssc.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ

For Latest News Updates, Join Our Whatsapp Community🚩
RELATED ARTICLES

Most Popular