HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಇಲ್ಲಿದೆ ಸಂಪೂರ್ಣ ವಿವರ

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಇಲ್ಲಿದೆ ಸಂಪೂರ್ಣ ವಿವರ

ನವದೆಹಲಿ: ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಭೀತಿ ಬೆನ್ನಲ್ಲೇ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 145 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,730 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1,940 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,49,111 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 2,07,067 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,24,21,113 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,59,607 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular