HomeKarnatakaBIG NEWS: ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯಗೆ ತಲೆ ಕೆಟ್ಟಿದೆ; ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ

BIG NEWS: ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯಗೆ ತಲೆ ಕೆಟ್ಟಿದೆ; ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ

ಕಲಬುರ್ಗಿ: ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕರಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಹೇಳುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯಗೆ ತಲೆ ಕೆಟ್ಟಿದೆ. ನಾವು ಮಾಡಿದ ಕೆಲಸಗಳನ್ನು ಜನ ಹಾಡಿ ಹೊಗಳುತ್ತಿದ್ದಾರೆ. ಒಂದು ವೇಳೆ ಅವರು ಒಳ್ಳೆಯ ಕೆಲಸ ಮಾಡಿದ್ದರೆ ಯಾಕೆ ಅಧಿಕಾರ ಕಳೆದುಕೊಳ್ಳುತ್ತಿದ್ದರು ? ಎಂದು ಪ್ರಶ್ನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಚ್ಚುಚ್ಚಾಗಿ ಮಾತನಾಡುವುದು ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಅವರಿಗೆ ಶೋಭೆ ತರಲ್ಲ. ವಿಪಕ್ಷ ನಾಯಕರು ಜವಾಬ್ದಾರಿಯಿಂದ ವರ್ತಿಸಬೇಕು. ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ಬಿಜೆಪಿಯೇ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular