HomeKarnatakaBIG NEWS: ಡಿ.ಕೆ.ಶಿ ಸಂಜೆ ಡಬಲ್ ಆಗ್ತಾರೆ; ಕಾಂಗ್ರೆಸ್ ಮುಳುಗುತ್ತಿರುವ ಹಡಗು ಆ ಪಕ್ಷಕ್ಕೆ ಯಾರು...

BIG NEWS: ಡಿ.ಕೆ.ಶಿ ಸಂಜೆ ಡಬಲ್ ಆಗ್ತಾರೆ; ಕಾಂಗ್ರೆಸ್ ಮುಳುಗುತ್ತಿರುವ ಹಡಗು ಆ ಪಕ್ಷಕ್ಕೆ ಯಾರು ಹೋಗ್ತಾರೆ; ಶಾಸಕ ವಿರೂಪಾಕ್ಷಪ್ಪ ತಿರುಗೇಟು

ಹಾವೇರಿ: ಹಾವೇರಿ ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ , ಡಿಕೆಶಿ ಸಂಜೆ ಡಬಲ್ ಆಗ್ತಾರೆ. ಸಾಯಂಕಾಲದ ವೇಳೆ ಅವರು ಮಾತನಾಡಿರಬಹುದು ಎಂದು ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಆ ಪಕ್ಷಕ್ಕೆ ಯಾರು ಹೋಗ್ತಾರೆ? ಈ ಹಿಂದೆ ಕಾಂಗ್ರೆಸ್ ನಾಯಕರು ಟಿಕೆಟ್ ಕೊಡುತ್ತೇವೆ ಎಂದು ಮನೆ ಬಾಗಿಲಿಗೆ ಬಂದಿದ್ದರು. ಆ ಸಂದರ್ಭದಲ್ಲಿಯೇ ನಾನು ಕಾಂಗ್ರೆಸ್ ಗೆ ಹೋಗಿಲ್ಲ. ಬಿಜೆಪಿಯ ಯಾರೊಬ್ಬರೂ ಕಾಂಗ್ರೆಸ್ ಗೆ ಹೋಗಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯಿಂದ ನನಗೆ ಟಿಕೆಟ್ ಸಿಗಲಿ, ಬಿಡಲಿ ನಾನು ಬಿಜೆಪಿಯಲ್ಲಿಯೇ ಇರುತ್ತೇನೆ. ಪಕ್ಷ ಸೂಚಿಸುವ ಅಭ್ಯರ್ಥಿ ಪರ ಕೆಲಸ ಮಾಡುತ್ತೇನೆ. ಸುರೇಶ್ ಗೌಡ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಯವೂ ಇಲ್ಲ ಎಂದು ಸ್ಪಷ್ಟಪಡಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular