ಬೆಂಗಳೂರು: ಲಂಚವಿಲ್ಲದೇ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಯಾವುದೇ ಒಂದು ಕೆಲಸವೂ ಆಗುವುದಿಲ್ಲ. ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಸಿದ್ದರಾಮಯ್ಯ, ಡಿಸಿಪಿ, ಎಸ್ ಪಿ ಪೋಸ್ಟಿಂಗ್ ಗೂ ಲಂಚ ಕೊಡಬೇಕು. ಎಲ್ಲಾ ಕಡೆ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಪ್ರತಿ ಇಲಾಖೆಯಲ್ಲಿಯೂ ಹಗರಣಗಳು ನಡೆಯುತ್ತಿವೆ. ಹಾಗಾಗಿ ಸರ್ಕಾರದ ವಿರುದ್ಧ ಬೆಂಗಳೂರಿನಾದ್ಯಂತ ಮೌನ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.
ಬೆಂಗಳೂರಿನಲ್ಲಿ ನಾವು 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಬಿಜೆಪಿಗೆ ಭಯ ಇದೆ. ಹಾಗಾಗಿ ಬಿಬಿಎಂಪಿ ಚುನಾವಣೆಯನ್ನೇ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.