HomeKarnatakaBIG NEWS: ಮೋದಿಯವರನ್ನು ಬೈದರೆ ಆಗಸಕ್ಕೆ ಉಗುಳಿದಂತೆ; ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಿಎಂ

BIG NEWS: ಮೋದಿಯವರನ್ನು ಬೈದರೆ ಆಗಸಕ್ಕೆ ಉಗುಳಿದಂತೆ; ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಿಎಂ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರ ಟೀಕೆಗಳನ್ನು ನಾನು ಸ್ವಾಗತ ಮಾಡುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಅವರ ಟೀಕೆಗಳನ್ನು ನಾನು ಸ್ವಾಗತಿಸುತ್ತೇನೆ. ಟೀಕೆಗಳನ್ನು ನಾನು ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಯಶಸ್ಸು ಕಾಣುತ್ತೇನೆ. ಕಾಂಗ್ರೆಸ್ ನಾಯಕರ ಸುಳ್ಳು ಆರೋಪ ಸರ್ಕಾರದ ಮೇಲೆ ಯಾವುದೇ ಪರಿಣಾಮಗಳು ಬೀರಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಯವರನ್ನು ಸಿದ್ದರಾಮಯ್ಯ ಹಿಟ್ಲರ್ ಗೆ ಹೋಲಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಮೋದಿಯವರನ್ನು ಬೈದರೆ ಆಗಸಕ್ಕೆ ಉಗುಳಿದಂತೆ. ಪ್ರಧಾನಿ ಮೋದಿ ಜನ ಮನ್ನಣೆ ಗಳಿಸಿದ ನಾಯಕ. ಈ ಹಿಂದೆ ಸೋನಿಯಾ ಗಾಂಧಿಯವರು ಮೋದಿಯವರನ್ನು ಟೀಕಿಸಿದ್ದರು. ಆಗ ಮೋದಿಯವರಿಗೆ ವೋಟ್ ಜಾಸ್ತಿಯಾಯಿತು. ಜನಮನ್ನಣೆ ಹೆಚ್ಚಾಯ್ತು. ಕಾಂಗ್ರೆಸ್ ನಾಯಕರು ಏನೇ ಹೇಳಿದರೂ ಜನ ನಮ್ಮ ಪರ ಇದ್ದಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular