ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ಕೆ ಆರ್ ಪಿ ಪಿ ಪಕ್ಷ ಸ್ಥಾಪಿಸಿರುವ ಜನಾರ್ದನ ರೆಡ್ಡಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಘೋಷಣೆ ಮಾಡಿದ್ದಾರೆ.
ಅಲ್ಲದೆ ಅವರ ಪತ್ನಿ ಲಕ್ಷ್ಮಿ ಅರುಣಾ ಅವರು ಸಹ ಬಳ್ಳಾರಿ ಅಥವಾ ಸಿಂಧನೂರು ವಿಧಾನಸಭಾ ಕ್ಷೇತ್ರದಿಂದ ಕೆ ಆರ್ ಪಿ ಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದ್ದು, ರಾಜ್ಯದ ಹಿತಕರ ಕ್ಷೇತ್ರಗಳಲ್ಲೂ ಜನಾರ್ಧನ ರೆಡ್ಡಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ನಿಲ್ಲಿಸಲಿದ್ದಾರೆ. ಜನಾರ್ದನ ರೆಡ್ಡಿ ಅವರ ಹೊಸ ಪಕ್ಷ ಬಿಜೆಪಿ, ಕಾಂಗ್ರೆಸ್ ಅಥವಾ ಜೆಡಿಎಸ್ ಹೀಗೆ ಯಾವ ಪಕ್ಷದ ಅಭ್ಯರ್ಥಿಗಳಿಗೆ ತೊಡಕನ್ನುಂಟಕ ಮಾಡಬಹುದು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.
ಇವರ ಮಧ್ಯೆ ಜನಾರ್ದನ ರೆಡ್ಡಿ ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರ ಜೊತೆ ರಾಜಸ್ಥಾನದ ಅಜ್ಮೀರ್ ನ ಖಾಜಾ ಗರೀಬ್ ನವಾಜ್ ದರ್ಗಾಗೆ ತೆರಳಿ ಚಾದರ್ ಸಲ್ಲಿಸುವುದರ ಜೊತೆಗೆ ಹೂ ಸಮರ್ಪಣೆ ಮಾಡಿದ್ದಾರೆ. ಮುಸ್ಲಿಂ ಸಮುದಾಯದ ಮತ ಸೆಳೆಯಲು ಈಗಾಗಲೇ ಜನಾರ್ದನ ರೆಡ್ಡಿ ಪ್ರಯತ್ನ ನಡೆಸಿದ್ದು, ಇದು ಈಗ ಕಾಂಗ್ರೆಸ್ ನಾಯಕರಿಗೆ ಚಿಂತೆಯನ್ನುಂಟು ಮಾಡಿದೆ ಎನ್ನಲಾಗಿದೆ.