HomeKarnatakaBIG NEWS: ಮಾಜಿ ಸಿಎಂ ಯಡಿಯೂರಪ್ಪಗೆ ಸುಪ್ರೀಂ ನಿಂದ ಮತ್ತೆ ರಿಲೀಫ್

BIG NEWS: ಮಾಜಿ ಸಿಎಂ ಯಡಿಯೂರಪ್ಪಗೆ ಸುಪ್ರೀಂ ನಿಂದ ಮತ್ತೆ ರಿಲೀಫ್

ನವದೆಹಲಿ: ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಸುಪ್ರೀಂಕೋರ್ಟ್ ನಿಂದ ಮತ್ತೆ ಬಿಗ್ ರಿಲೀಫ್ ಸಿಕ್ಕಿದೆ.

ಯಡಿಯೂರಪ್ಪ ವಿರುದ್ಧದ ಡಿ ನೋಟಿಫಿಕೇಷನ್ ಪ್ರಕರಣದ ಸಂಬಂಧ ನೀಡಲಾಗಿದ್ದ ಮಧ್ಯಂತರ ರಕ್ಷಣೆ ಆದೇಶವನ್ನು ರದ್ದುಗೊಳಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಈ ಹಿಂದೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಆಲಂಪಾಷ ಮಧ್ಯಂತರ ರಕ್ಷಣೆ ಆದೇಶ ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ದ್ವಿಸದಸ್ಯಪೀಠ ಅಲಂಪಾಷಾ ಅರ್ಜಿ ವಜಾಗೊಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular