HomeIndiaಸರ್ಜಿಕಲ್ ಸ್ಟ್ರೈಕ್ ಬಗ್ಗೆ ದಿಗ್ವಿಜಯ್ ಸಿಂಗ್ ನೀಡಿದ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್

ಸರ್ಜಿಕಲ್ ಸ್ಟ್ರೈಕ್ ಬಗ್ಗೆ ದಿಗ್ವಿಜಯ್ ಸಿಂಗ್ ನೀಡಿದ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತೀಯ ಸಶಸ್ತ್ರ ಪಡೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಕುರಿತು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ನೀಡಿದ ಹೇಳಿಕೆಗಳಿಂದ ಕಾಂಗ್ರೆಸ್ ಸೋಮವಾರ ಅಂತರ ಕಾಯ್ದುಕೊಂಡಿದೆ.

ಹಿರಿಯ ನಾಯಕ ದಿಗ್ವಿಜಯ ಸಿಂಗ್ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವರದೇ ಆದವು. ಕಾಂಗ್ರೆಸ್ ಅವರ ಹೇಳಿಕೆ ಪ್ರತಿಬಿಂಬಿಸುವುದಿಲ್ಲ. ಯುಪಿಎ ಸರ್ಕಾರವು 2014 ರ ಮೊದಲು ಸರ್ಜಿಕಲ್ ಸ್ಟ್ರೈಕ್ ಗಳನ್ನು ನಡೆಸಿತು. ರಾಷ್ಟ್ರೀಯ ಹಿತಾಸಕ್ತಿಯ ಎಲ್ಲಾ ಮಿಲಿಟರಿ ಕ್ರಮಗಳನ್ನು ಕಾಂಗ್ರೆಸ್ ಬೆಂಬಲಿಸಿದೆ ಮತ್ತು ಬೆಂಬಲಿಸುತ್ತದೆ ಎಂದು ಎಐಸಿಸಿ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ದಿಗ್ವಿಜಯ ಸಿಂಗ್ ಅವರು ವಾಗ್ದಾಳಿ ನಡೆಸಿದ್ದು, ಹಲವಾರು ಭಯೋತ್ಪಾದಕರನ್ನು ಕೊಂದಿರುವುದಾಗಿ ಹೇಳುತ್ತಿರುವಾಗ ಸರ್ಜಿಕಲ್ ಸ್ಟ್ರೈಕ್‌ ಗಳ ಬಗ್ಗೆ ಯಾವುದೇ ಪುರಾವೆಯನ್ನು ನೀಡಿಲ್ಲ ಏಕೆ? ನರೇಂದ್ರ ಮೋದಿ ಸರಕಾರ ಸುಳ್ಳಿನ ಕಂತೆಯಲ್ಲಿ ದೇಶವನ್ನು ಆಳುತ್ತಿದೆ ಎಂದು ಆರೋಪಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular