ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ‘ಭಾರತ್ ಜೋಡೋ’ ಯಾತ್ರೆ ಹಮ್ಮಿಕೊಂಡಿದ್ದು, ಇದು ಈಗಾಗಲೇ ಅಂತಿಮ ಘಟ್ಟ ತಲುಪಿದೆ. ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾಗಿದ್ದ ಈ ಯಾತ್ರೆ ಈಗ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿದ್ದು, ಜನವರಿ 26ಕ್ಕೆ ಸಮಾರೋಪಗೊಳ್ಳಲಿದೆ.
ಇದರ ಮಧ್ಯೆ ರಾಹುಲ್ ಗಾಂಧಿ ಯೂಟ್ಯೂಬ್ ಚಾನೆಲ್ ಒಂದರ ಆಂಕರ್ ಗೆ ಸಂದರ್ಶನ ನೀಡಿದ್ದು, ಇದರಲ್ಲಿ ಮದುವೆ ಸೇರಿದಂತೆ ತಮ್ಮ ಮುಂದಿನ ಕನಸುಗಳ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಂದರ್ಶನದ ವೇಳೆ ಯೂಟ್ಯೂಬ್ ಚಾನೆಲ್ ನಿರೂಪಕಿ, ನಿಮ್ಮ ಮದುವೆ ಯಾವಾಗ ಎಂದು ಪ್ರಶ್ನಿಸಿದ ವೇಳೆ ಉತ್ತರಿಸಿರುವ ರಾಹುಲ್ ಗಾಂಧಿ, ಹೊಂದಾಣಿಕೆಯಾಗುವ ಹುಡುಗಿ ಸಿಕ್ಕ ಬಳಿಕ ನಾನು ಮದುವೆಯಾಗುತ್ತೇನೆ ಎಂದು ತಿಳಿಸಿದ್ದಾರೆ. ಮದುವೆಗೆ ನನ್ನ ವಿರೋಧ ಇಲ್ಲ. ನಿರೀಕ್ಷೆಗೆ ತಕ್ಕನಾದ ಹುಡುಗಿ ಸಿಕ್ಕರೆ ನಾನು ಮದುವೆಯಾಗುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.