HomeLatest NewsBIG NEWS: ನಿರ್ಬಂಧದ ನಡುವೆಯೂ ಮೋದಿ ಕುರಿತ ಬಿಬಿಸಿ ಸಾಕ್ಷ್ಯ ಚಿತ್ರ ಪ್ರದರ್ಶನಕ್ಕೆ ಮುಂದಾದ JNU...

BIG NEWS: ನಿರ್ಬಂಧದ ನಡುವೆಯೂ ಮೋದಿ ಕುರಿತ ಬಿಬಿಸಿ ಸಾಕ್ಷ್ಯ ಚಿತ್ರ ಪ್ರದರ್ಶನಕ್ಕೆ ಮುಂದಾದ JNU ವಿದ್ಯಾರ್ಥಿ ಸಂಘಟನೆ

ಗುಜರಾತಿನಲ್ಲಿ ನಡೆದ ಗೋಧ್ರೋತ್ತರ ಗಲಭೆಗೆ ಸಂಬಂಧಿಸಿದಂತೆ ಬಿಬಿಸಿ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಎಂಬ ಹೆಸರಿನ ಸಾಕ್ಷ್ಯ ಚಿತ್ರವನ್ನು ನಿರ್ಮಿಸಿದ್ದು, ಆದರೆ ಇದರಲ್ಲಿ ವಿಷಯವನ್ನು ಸಂಪೂರ್ಣವಾಗಿ ತಿರುಚಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಸ್ವತಃ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಸಾಕ್ಷ್ಯ ಚಿತ್ರದ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೀಗಾಗಿಯೇ ಭಾರತದಲ್ಲಿ ಈ ಸಾಕ್ಷ್ಯ ಚಿತ್ರದ ಮೇಲೆ ನಿರ್ಬಂಧ ಹೇರಲಾಗಿದ್ದು, ಇದರ ಮಧ್ಯೆಯೂ ನವದೆಹಲಿಯ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆ ತನ್ನ ಕಚೇರಿಯಲ್ಲಿ ಇಂದು (ಮಂಗಳವಾರ) ರಾತ್ರಿ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯ ಚಿತ್ರವನ್ನು ಪ್ರದರ್ಶಿಸುವುದಾಗಿ ತಿಳಿಸುವ ಮೂಲಕ ವಿವಾದ ಸೃಷ್ಟಿಸಿದೆ.

ಸಾಕ್ಷ್ಯ ಚಿತ್ರ ಪ್ರದರ್ಶಿಸುವ ಕುರಿತಂತೆ ಭಿತ್ತಿ ಪತ್ರವನ್ನು ಸಹ ಹಂಚಲಾಗುತ್ತಿದ್ದು, ಆದರೆ ಇದಕ್ಕೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿರೋಧ ವ್ಯಕ್ತಪಡಿಸಿದೆ. ಸಾಕ್ಷ್ಯ ಚಿತ್ರ ಪ್ರದರ್ಶನಕ್ಕೆ ವಿದ್ಯಾರ್ಥಿ ಸಂಘಟನೆ ತನ್ನ ಅನುಮತಿ ಪಡೆದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದ್ದು, ಇಂತಹ ಅನಧಿಕೃತ ಚಟುವಟಿಕೆಗಳಿಂದ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟಾಗುತ್ತದೆ. ಹೀಗಾಗಿ ಸಾಕ್ಷ್ಯ ಚಿತ್ರ ಪ್ರದರ್ಶನವನ್ನು ರದ್ದುಪಡಿಸಬೇಕು ಎಂದು ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular