HomeKarnatakaBIG NEWS: ಕೇಸರಿ, ಕುಂಕುಮ, ದತ್ತಮಾಲೆ, ಅಯೋಧ್ಯೆ ಬಗ್ಗೆ ಶೃಂಗೇರಿ ಶಾಸಕ ರಾಜೇಗೌಡ ವಿವಾದಿತ ಹೇಳಿಕೆ

BIG NEWS: ಕೇಸರಿ, ಕುಂಕುಮ, ದತ್ತಮಾಲೆ, ಅಯೋಧ್ಯೆ ಬಗ್ಗೆ ಶೃಂಗೇರಿ ಶಾಸಕ ರಾಜೇಗೌಡ ವಿವಾದಿತ ಹೇಳಿಕೆ

ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜೇಗೌಡ ಅವರು ದತ್ತ ಪೀಠ, ಅಯೋಧ್ಯೆ ಹೋರಾಟ ಹಿಂದೂ ಪರ ಸಂಘಟನೆಗಳ ಬಗ್ಗೆ ಟೀಕಿಸಿದ್ದಾರೆ. ಅವರು ನಾಲಿಗೆ ಹರಿಬಿಟ್ಟಿರುವ ಆಡಿಯೋ ವೈರಲ್ ಆಗಿದೆ.

ದತ್ತ ಮಾಲೆ ಹಾಕಿಸಿ, ಕುಂಕುಮ ಹಾಕಿ ಕರೆದೊಯ್ಯುತ್ತಾರೆ. ಅಯೋಧ್ಯೆ ಹೋರಾಟದಲ್ಲಿ ಲಕ್ಷಾಂತರ ಜನರನ್ನು ಬಲಿಕೊಟ್ಟರು ಎಂದು ರಾಜೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಯೋಧ್ಯ, ದತ್ತಪೀಠ ಹೋರಾಟದ ಬಗ್ಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಸರಿ ಶಾಲು, ಕುಂಕುಮ, ದತ್ತಮಾಲೆ ಹಾಕಿದರೆ ಹೊಟ್ಟೆ ತುಂಬುವುದಿಲ್ಲ ಎಂದು ಶೃಂಗೇರಿ ಶಾಸಕ ರಾಜೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು, ಶಾಸಕರ ಬಹಿರಂಗ ಕ್ಷಮೆಯಾಚನೆಗೆ ಒತ್ತಾಯಿಸಿ ಹಿಂದೂ ಸಂಘಟನೆಗಳಿಂದ ಜಿಲ್ಲಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular