HomeIndia'ಸರ್ಜಿಕಲ್ ಸ್ಟ್ರೈಕ್' ಗೆ ಮತ್ತೆ ಸಾಕ್ಷ್ಯ ಕೇಳಿದ ಕಾಂಗ್ರೆಸ್ ನಾಯಕ

‘ಸರ್ಜಿಕಲ್ ಸ್ಟ್ರೈಕ್’ ಗೆ ಮತ್ತೆ ಸಾಕ್ಷ್ಯ ಕೇಳಿದ ಕಾಂಗ್ರೆಸ್ ನಾಯಕ

ಜಮ್ಮು ಕಾಶ್ಮೀರದ ಉರಿಯಲ್ಲಿ ಪಾಕ್ ಪೋಷಿತ ಭಯೋತ್ಪಾದಕರು ಯೋಧರ ಮೇಲೆ ನಡೆಸಿದ ದಾಳಿಯಲ್ಲಿ 19 ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಇದಕ್ಕೆ ಪ್ರತೀಕಾರವಾಗಿ ಭಾರತ, ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದು ಈ ದಾಳಿಯಲ್ಲಿ ನೂರಾರು ಉಗ್ರರು ಬಲಿಯಾಗಿದ್ದರು.

ಆದರೆ ಈ ದಾಳಿ ಕುರಿತಂತೆ ಪದೇ ಪದೇ ಪ್ರಸ್ತಾಪಿಸುತ್ತಿರುವ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್, ಸರ್ಜಿಕಲ್ ಸ್ಟ್ರೈಕ್ ನಡೆಸಿರುವ ಕುರಿತು ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿದ್ದರು. ಇದೀಗ ಅವರು ಈ ವಿಷಯವನ್ನು ಮತ್ತೊಮ್ಮೆ ಕೆದಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತಂತೆ ಮಾತನಾಡಿರುವ ದಿಗ್ವಿಜಯ್ ಸಿಂಗ್, ಸರ್ಜಿಕಲ್ ಸ್ಟ್ರೈಕ್ ಕುರಿತಂತೆ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಈವರೆಗೆ ಪುರಾವೆಯನ್ನೇ ನೀಡಿಲ್ಲ. ಬಿಜೆಪಿಯವರು ಕೇವಲ ಸುಳ್ಳುಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಆದರೆ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿರುವ ಕಾಂಗ್ರೆಸ್, ಇದು ದಿಗ್ವಿಜಯ ಸಿಂಗ್ ಅವರ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದೆ.

For Latest News Updates, Join Our Whatsapp Community🚩
RELATED ARTICLES

Most Popular