alex Certify ಹಿಂದೂ ಯುವತಿ ಹುಟ್ಟುಹಬ್ಬದಲ್ಲಿ ಹಾಜರಿದ್ದ ಮುಸ್ಲಿಂ ಯುವಕರು; ಥಳಿಸಿ ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದೂ ಯುವತಿ ಹುಟ್ಟುಹಬ್ಬದಲ್ಲಿ ಹಾಜರಿದ್ದ ಮುಸ್ಲಿಂ ಯುವಕರು; ಥಳಿಸಿ ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು

ಮನೆಯೊಂದರಲ್ಲಿ ತಮ್ಮ ಹಿಂದೂ ಸ್ನೇಹಿತೆಯ ಹುಟ್ಟುಹಬ್ಬ ಆಚರಿಸುತ್ತಿದ್ದ ಐವರು ಮುಸ್ಲಿಂ ಯುವಕರನ್ನು ಥಳಿಸಿರುವ ಬಜರಂಗದಳ ಕಾರ್ಯಕರ್ತರು ಲವ್ ಜಿಹಾದ್ ಮಾಡಲಾಗುತ್ತಿತ್ತು ಎಂದು ಆರೋಪಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದೀಗ ಐವರು ಯುವಕರನ್ನು ಜೈಲಿಗೆ ಕಳುಹಿಸಲಾಗಿದೆ.

ಜನವರಿ 21ರ ಶನಿವಾರದಂದು ಮಧ್ಯಪ್ರದೇಶದ ಇಂದೋರ್ ನ ಎಂಐಜಿ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಅಲ್ಲಿನ ಮನೆಯೊಂದರಲ್ಲಿ 24 ವರ್ಷದ ಹಿಂದೂ ಯುವತಿಯ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿತ್ತು. ಆಕೆಯ ಸ್ನೇಹಿತೆ ಸೇರಿದಂತೆ ಐವರು ಮುಸ್ಲಿಂ ಯುವಕರು ಸಹ ಇದರಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ಏಕಾಏಕಿ ನುಗ್ಗಿದ ಬಜರಂಗದಳ ಕಾರ್ಯಕರ್ತರ ದೊಡ್ಡ ಗುಂಪು ಅಕ್ರಮವಾಗಿ ಮನೆ ಪ್ರವೇಶಿಸಿದೆ. ಅಲ್ಲದೆ ಲವ್ ಜಿಹಾದ್ ನಡೆಸಲಾಗುತ್ತಿದೆ ಎಂದು ಆರೋಪಿಸಿ ಯುವಕರನ್ನು ಥಳಿಸಲಾಗಿದೆ. ನಂತರ ಪೊಲೀಸ್ ಠಾಣೆಗೆ ಕರೆದೊಯ್ದು ಒಪ್ಪಿಸಲಾಗಿದ್ದು, ಐವರು ಯುವಕರನ್ನು ಜೈಲಿಗೆ ಕಳುಹಿಸಲಾಗಿದೆ.

ಪೊಲೀಸರ ಈ ಕ್ರಮ ಈಗ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಕಾರಣವಾಗಿದ್ದು, ಅಕ್ರಮವಾಗಿ ಮನೆಗೆ ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ಕಾರ್ಯಕರ್ತರನ್ನು ಬಂಧಿಸುವುದನ್ನು ಬಿಟ್ಟು ಮುಸ್ಲಿಂ ಯುವಕರನ್ನು ಜೈಲಿಗೆ ಕಳುಹಿಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಲಾಗುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...