HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; 24 ಗಂಟೆಯಲ್ಲಿ ಕೇವಲ 3 ಸಕ್ರಿಯ...

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; 24 ಗಂಟೆಯಲ್ಲಿ ಕೇವಲ 3 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ ಭೀತಿ ನಡುವೆಯೇ ಕೋವಿಡ್ ಪ್ರಕರಣಗಳು ದಿಢೀರ್ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 88 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಕೇರಳದಲ್ಲಿ ಓರ್ವ ವ್ಯಕ್ತಿ ಕೋವಿಡ್ ಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಈವರೆಗೆ 5,30,737 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಇನ್ನು ಕೋವಿಡ್ ಸಕ್ರಿಯ ಪ್ರಕರಣವೂ ಗಣನೀಯವಾಗಿ ತಗ್ಗಿದ್ದು, ದೇಶದಲ್ಲಿ 1,922 ಕೋವಿಡ್ ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಅಂದರೆ 24 ಗಂಟೆಯಲ್ಲಿ ಕೇವಲ ಮೂರು ಅಕ್ಟೀವ್ ಕೇಸ್ ದಾಖಲಾಗಿದೆ. ದೇಶದಲ್ಲಿ ಈವರೆಗೆ 4,41,49,547 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 2,12,020 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,32,75,159 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,52,540 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular