ಕ್ಯಾಲಿಫೋರ್ನಿಯಾ: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ವಿವಿಧೆಡೆ ಗುಂಡಿನ ದಾಳಿಯಾಗಿದ್ದು 11 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿರುವ ವರದಿಯಾಗಿದೆ. ಅಮೆರಿಕದಲ್ಲಿ ನಡೆಯುತ್ತಿದ್ದ ಚೈನೀಸ್ ನ್ಯೂ ಇಯರ್ ಪಾರ್ಟಿ ವೇಳೆ ಗುಂಡಿನ ದಾಳಿ ನಡೆದಿತ್ತು.
ಡೆಸ್ ಮೊಯಿನ್ಸ್ ಶಾಲೆಯೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, ಇದರಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ. ಘಟನೆಯ ಬಳಿಕ ಇದೀಗ 26 ವರ್ಷದ ಯುವಕ ಬ್ರಾಂಡನ್ ತ್ಸೇ ಎಂಬಾತ ಬಂದೂಕುದಾರಿಯೊಂದಿಗೆ ಹೋರಾಟ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.
ತನ್ನ ಬಳಿ ಯಾವುದೇ ಆಯುಧ ಇಲ್ಲದಿದ್ದರೂ ಬಂದೂಕುಧಾರಿ ಮತ್ತಷ್ಟು ಜನರನ್ನು ಕೊಲ್ಲಬಾರದು ಎನ್ನುವ ಉದ್ದೇಶದಿಂದ ಈ ಯುವಕ, ತನ್ನ ಪ್ರಾಣವನ್ನು ಪಣಕ್ಕಿಟ್ಟು ಬಂದೂಕು ಧಾರಿಯನ್ನು ತಳ್ಳಲು ಪ್ರಯತ್ನಿಸಿರುವ ಭಯಾನಕ ಘಟನೆಯ ವಿಡಿಯೋ ಇದಾಗಿದೆ. ಈತನೇ ನಿಜವಾದ ಹೀರೋ ಎಂದು ಕಮೆಂಟ್ಗಳ ಸುರಿಮಳೆಯಾಗಿದೆ.
ಶನಿವಾರ ರಾತ್ರಿ ಕ್ಯಾಲಿಫೋರ್ನಿಯಾದ ಮಾಂಟೆರಿ ಪಾರ್ಕ್‌ನಲ್ಲಿ ಆರೋಪಿ ಗುಂಡಿನ ದಾಳಿ ನಡೆಸಿದ್ದ. ಚೀನೀ ಚಾಂದ್ರಮಾನ ಪದ್ಧತಿಯ ಪ್ರಕಾರ ಅರಂಭವಾಗುವ ಹೊಸ ವರ್ಷವನ್ನು ಸಂಭ್ರಮಿಸಲು ಪಾರ್ಕ್ ನಲ್ಲಿ ಸಾವಿರಾರು ಜನರು ಸೇರಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಆರೋಪಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದ.
https://youtu.be/-t33gXAsb7w