
ರಾಯಚೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಹಾಸನದಿಂದ ಸ್ಪರ್ಧಿಸಲು ಬೇರೆ ಸಮರ್ಥ ಅಭ್ಯರ್ಥಿಗಳು ನಮ್ಮಲ್ಲಿ ಇದ್ದಾರೆ. ಇಲ್ಲಿ ಕುಟುಂಬ ರಾಜಕಾರಣದ ಪ್ರಶ್ನೆಯಲ್ಲ ಎಂದರು.
ನಮ್ಮ ಕುಟುಂಬದಲ್ಲಿ ಯಾವುದೇ ಸಂಘರ್ಷವಿಲ್ಲ. ಪಕ್ಷದ ಲಕ್ಷಾಂತರ ಜನರಿಗೆ ತಲೆ ಕೊಡುವ ಜವಾಬ್ದಾರಿ ನನ್ನದು. ಚನ್ನಪಟ್ಟಣ ಕ್ಷೆತ್ರದಲ್ಲಿ 20 ವರ್ಷಗಳಿಂದ ಗೆಲ್ಲಲೂ ಆಗಿರಲಿಲ್ಲ. ಆದರೆ ಮಧುಗಿರಿಯಲ್ಲಿ ಅನಿತಾ ಕುಮಾರಸ್ವಾಮಿಗೆ ಬೇಡ ಅಂದಿದ್ದೆ. ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಇಲ್ಲ ಎಂದು ಒತ್ತಡ ಹಾಕಿದ್ದರು. ಅನಿವಾರ್ಯ ಕಾರಣಕ್ಕೆ ಬಿಟ್ಟು ಕೊಟ್ಟಿದ್ದಾರೆ ಎಂದರು.
ಹಾಸನದಲ್ಲಿ ಸಮರ್ಥ ಅಭ್ಯರ್ಥಿ ಇದ್ದಾರೆ. ಯಾರೂ ಅಭ್ಯರ್ಥಿಗಳೇ ಇಲ್ಲ. ಅನಿವಾರ್ಯತೆ ಇದೆ ಎಂದಿದ್ದರೆ ನಾನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತಿದ್ದೆ. ಇಲ್ಲಿ ಕುಟುಂಬ ರಾಜಕಾರಣದ ಪ್ರಶ್ನೆ ಅಂತ ಅಲ್ಲ. ಸಮರ್ಥ ಅಭ್ಯರ್ಥಿಗಳಿದ್ದಾರೆ ಎಂದು ಹೇಳುವ ಮೂಲಕ ಭವಾನಿ ರೇವಣ್ಣ ಅವರಿಗೆ ಟಿಕೆಟ್ ಇಲ್ಲ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.

