ಬೆಂಗಳೂರು: ಬೆಂಗಳೂರು ನಾಗರಬಾವಿಯಲ್ಲಿರುವ ಆರ್ಕಿಡ್ ಇಂಟರ್ನ್ಯಾಷನಲ್ ಸ್ಕೂಲ್ ವಿರುದ್ಧ ಶಿಕ್ಷಣ ಇಲಾಖೆ ಕ್ರಮಕ್ಕೆ ಮುಂದಾಗಿದ್ದು, ಕ್ರಿಮಿನಲ್ ದೂರು ದಾಖಲಿಸಲಾಗಿದೆ.
ಸಿಬಿಎಸ್ಇ ಪಾಠ ಮಾಡುವುದಾಗಿ ಪೋಷಕರಿಗೆ ಸುಳ್ಳು ಹೇಳಿ ಲಕ್ಷಾಂತರ ರೂಪಾಯಿ ಶುಲ್ಕ ಪಡೆದುಕೊಂಡಿದ್ದ ಆರ್ಕಿಡ್ ಶಾಲೆ ಸಿಬಿಎಸ್ಇ ಶಿಕ್ಷಣ ಬೋಧಿಸಲು ಮಾನ್ಯತೆ ಪಡೆದುಕೊಂಡಿಲ್ಲ. ಈಗ ಸ್ಟೇಟ್ ಸಿಲೆಬಸ್ ನಲ್ಲಿ ಪರೀಕ್ಷೆ ನಡೆಸಲು ಮುಂದಾಗಿದ್ದು, ಪೋಷಕರು ಆಕ್ರೋಶಗೊಂಡು ಶಾಲೆಯ ಎದುರು ಪ್ರತಿಭಟನೆ ಕೂಡ ನಡೆಸಿದ್ದಾರೆ.
ಶಿಕ್ಷಣ ಇಲಾಖೆ ಆರ್ಕಿಡ್ ಶಾಲೆಯ ಆಡಳಿತ ಮಂಡಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದೆ. ಶಾಲೆಯನ್ನು ಕಪ್ಪು ಪಟ್ಟಿಗೆ ಸೇರಿಸಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದ್ದು, ಆರ್ಕಿಡ್ ಶಾಲಾ ಆಡಳಿತ ಮಂಡಳಿ ಹೊಸ ಶಾಲೆ ತೆರೆಯದಂತೆ ನಿರ್ಬಂಧ ಹೇರಲಾಗುವುದು ಎಂದು ಹೇಳಲಾಗಿದೆ.