ಶಿವಮೊಗ್ಗ: ಕೊಲ್ಲೂರು -ಕೊಡಚಾದ್ರಿಗೆ ಕೇಬಲ್ ಕಾರ್ ಮೂಲಕ ಸಂಪರ್ಕ ನೀಡುವ ಐತಿಹಾಸಿಕ ಯೋಜನೆಗೆ ಕೇಂದ್ರ ಸರ್ಕಾರ 500 ಕೋಟಿ ರೂಪಾಯಿ ಬಿಡುಗಡೆಗೊಳಿಸಿದೆ.
ಸಂಸದ ಬಿ.ವೈ. ರಾಘವೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಅಮೃತ ಮಹೋತ್ಸವ ಪ್ರಯುಕ್ತ ಜೆಎನ್ಎನ್ಸಿಇ ನಲ್ಲಿ ಸ್ಥಾಪಿಸಿರುವ 400 ಕಿಲೋ ವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಕೊಲ್ಲೂರು -ಕೊಡಚಾದ್ರಿಗೆ ಕೇಬಲ್ ಕಾರ್ ಮೂಲಕ ಸಂಪರ್ಕ ಕಲ್ಪಿಸುವ ಯೋಜನೆಗೆ ಕೇಂದ್ರ ಸರ್ಕಾರ 500 ಕೋಟಿ ಬಿಡುಗಡೆಗೊಳಿಸಿ ಆದೇಶಿಸಿದೆ. ಇದರಿಂದ ಪ್ರವಾಸೋದ್ಯಮಕ್ಕೆ, ಕೊಲ್ಲೂರಿಗೆ ಹೋಗುವ ಭಕ್ತಾದಿಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.