HomeKarnatakaBIG NEWS: ಅಭಿಷೇಕ್ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಮಾತುಕತೆ

BIG NEWS: ಅಭಿಷೇಕ್ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಮಾತುಕತೆ

ಶಿವಮೊಗ್ಗ: ರೆಬಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಬಿಜೆಪಿ ಸೇರ್ಪಡೆ ಬಗ್ಗೆ ಮಾತುಕತೆ ನಡೆದಿದೆ. ಮುಂದಿನ ಎರಡು ದಿನಗಳಲ್ಲಿ ಈ ಬಗ್ಗೆ ಸ್ಪಷ್ಟನೆ ಸಿಗಲಿದೆ ಎಂದು ಸಚಿವ ಕೆ.ಸಿ. ನಾರಾಯಣಗೌಡ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಅಭಿಷೇಕ್ ಅಂಬರೀಶ್ ಪಕ್ಷ ಸೇರ್ಪಡೆ ಬಗ್ಗೆ ಮಂಡ್ಯದಲ್ಲಿ ಮಾತುಕತೆ ನಡೆದಿದ್ದು, ಮುಂದಿನ ಎರಡು ದಿನಗಳಲ್ಲಿ ಸ್ಪಷ್ಟತೆ ಸಿಗಲಿದೆ. ಅಭಿಷೇಕ್ ಅಂಬರೀಶ್ ರಾಜಕೀಯಕ್ಕೆ ಬರುತ್ತಾರೆ ಎಂಬ ಮಾತುಗಳು ಮೊದಲಿನಿಂದಲೂ ಕೇಳಿ ಬರುತ್ತಿದ್ದು, ಅವರು ಪಕ್ಷಕ್ಕೆ ಬಂದರೆ ಒಳ್ಳೆಯದು. ಈ ಕುರಿತಾಗಿ ಮಂಡ್ಯದ ಸಂಸದರಾದ ಅಭಿಷೇಕ್ ಅಂಬರೀಶ್ ಅವರ ತಾಯಿ ಸುಮಲತಾ ಅಂಬರೀಶ್ ಅವರೊಂದಿಗೂ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಬರೀಶ್ ಅವರು ಮಂಡ್ಯ ಜಿಲ್ಲೆಯವರಾಗಿದ್ದು, ಅವರ ಪುತ್ರ ಅಭಿಷೇಕ್ ಬಿಜೆಪಿ ಸೇರಿ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಒಳ್ಳೆಯದು. ಈ ಬಗ್ಗೆ ಸುಮಲತಾ ಅಂಬರೀಶ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular