HomeKarnatakaಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ; ಇಬ್ಬರ ಸ್ಥಿತಿ ಗಂಭೀರ

ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ; ಇಬ್ಬರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಕಂಗೆಟ್ಟಿದ್ದ ಚಿಕ್ಕಮಗಳೂರು ಭಾಗದ ಜನರು ಇದೀಗ ಕಾಡುಕೋಣ ದಾಳಿಗೆ ಬೆಚ್ಚಿ ಬಿದ್ದಿದ್ದಾರೆ. ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮತ್ತಿಕಟ್ಟೆ ರಸ್ತೆಯಲ್ಲಿ ನಡೆದಿದೆ.

ಕಾಡುಕೋಣದ ದಾಳಿಗೆ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಿಲೀಪ್ ಹಾಗೂ ಆಶಾ ಗಾಯಾಳುಗಳು. ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಿಲೀಪ್ ಹಾಗೂ ಆಶಾ ಇಬ್ಬರೂ ಮತ್ತಿಗಟ್ಟೆಯಿಂದ ಕಲ್ಯಾಣಗದ್ದೆಗೆ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಕಾಡುಕೋಣ ದಾಳಿ ನಡೆಸಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular