HomeKarnatakaBIG NEWS: ಕುರ್ಚಿ ವಿಚಾರವಾಗಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ; ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿದ...

BIG NEWS: ಕುರ್ಚಿ ವಿಚಾರವಾಗಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ; ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿದ ಬೆಂಬಲಿಗರು

ರಾಮನಗರ: ಕುರ್ಚಿಯಲ್ಲಿ ಕುಳಿತುಕೊಳ್ಳುವ ವಿಚಾರವಾಗಿ ಬೆಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.

ಸರ್ಕಾರದ ನಾಮನಿರ್ದೇಶಿತ ನಿರ್ದೇಶಕ ಎಸ್.ಲಿಂಗರಾಜು ಹಾಗೂ ಬಮೂಲ್ ನಿರ್ದೇಶಕ ಜಯಮುತ್ತು ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಕುರ್ಚಿಯಲ್ಲಿ ಕುಳಿತುಕೊಳ್ಳುವ ವಿಚಾರವಾಗಿ ನಡೆದ ಗಲಾಟೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಬಡಿದಾಟಕ್ಕೆ ಕಾರಣವಾಗಿದೆ. ಬಮೂಲ್ ಉಪ ವ್ಯವಸ್ಥಾಪಕ ಹೇಮಂತ್ ಕುರ್ಚಿ ಮೇಲೆ ಕುಳಿತುಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಜೆಡಿಎಸ್ ನ ಜಯಮುತ್ತು ಬೆಂಬಲಿಗರು ಅಡ್ಡಿಪಡಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರ ನಡೆಗೆ ಬಿಜೆಪಿಯ ಲಿಂಗೇಶ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಉಭಯ ನಾಯಕರ ಬೆಂಬಲಿಗರ ನಡುವೆ ವಾಗ್ವಾದ ಆರಂಭವಾಗಿದೆ. ಪರಸ್ಪರ ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಕಾರ್ಯಕರ್ತರು ತಲುಪಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular