HomeKarnatakaರಾಜ್ಯಕ್ಕೆ ಅಮಿತ್ ಶಾ ಎಂಟ್ರಿ: ರೋಡ್ ಶೋ ಸೇರಿ ವಿವಿಧ ಕಾರ್ಯಕ್ರಮ

ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ: ರೋಡ್ ಶೋ ಸೇರಿ ವಿವಿಧ ಕಾರ್ಯಕ್ರಮ

ಧಾರವಾಡ: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ರಾತ್ರಿ ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಶನಿವಾರ ಕರ್ನಾಟಕದಲ್ಲಿ ರೋಡ್ ಶೋ, ಸಾರ್ವಜನಿಕ ಸಭೆ ಮತ್ತು ಇತರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಧಾರವಾಡದ ಕುಂದಗೋಳದ ಬ್ರಹ್ಮದೇವರ ದೇವಸ್ಥಾನದ ಬಳಿ ರೋಡ್‌ ಶೋನಲ್ಲಿ ಭಾಗವಹಿಸಲಿದ್ದಾರೆ. ಬೆಳಗಾವಿ ಜಿಲ್ಲೆಯ ಎಂಕೆ ಹುಬ್ಬಳ್ಳಿಯಲ್ಲಿ ಶನಿವಾರ ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಬ್ಬಳ್ಳಿ ನಗರದ ಕೆಎಲ್‌ಇ ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಬೆಳಿಗ್ಗೆ 10.30 ಕ್ಕೆ ಬಿ.ವಿ.ಭೂಮರಡ್ಡಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಪ್ಲಾಟಿನಂ ಜುಬಿಲಿ ಸಮಾರಂಭದಲ್ಲಿ ಭಾಗವಹಿಸುವರು.

ಧಾರವಾಡದಲ್ಲಿರುವ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ(ಎನ್‌ಎಫ್‌ಎಸ್‌ಯು) ಮಧ್ಯಾಹ್ನದ ಸುಮಾರಿಗೆ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ(ಕರ್ನಾಟಕ ಕ್ಯಾಂಪಸ್) ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ. ಮಧ್ಯಾಹ್ನ ಧಾರವಾಡದ ಕುಂದಗೋಳದ ಶಂಬುಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ. ಕ್ಷೇತ್ರದ ಶ್ರೀ ಬಸವಣ್ಣ ದೇವರ ಮಠಕ್ಕೆ ಭೇಟಿ ನೀಡಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular