HomeEntertainmentತೀವ್ರ ಹೃದಯಾಘಾತಕ್ಕೊಳಗಾಗಿದ್ದ ನಟ ನಂದಮೂರಿ ತಾರಕರತ್ನ ನಾರಾಯಣ ಹೃದಯಾಲಯಕ್ಕೆ ಶಿಫ್ಟ್: ಐಸಿಯುನಲ್ಲಿ ಚಿಕಿತ್ಸೆ

ತೀವ್ರ ಹೃದಯಾಘಾತಕ್ಕೊಳಗಾಗಿದ್ದ ನಟ ನಂದಮೂರಿ ತಾರಕರತ್ನ ನಾರಾಯಣ ಹೃದಯಾಲಯಕ್ಕೆ ಶಿಫ್ಟ್: ಐಸಿಯುನಲ್ಲಿ ಚಿಕಿತ್ಸೆ

ತೆಲುಗು ಚಿತ್ರನಟ ನಂದಮೂರಿ ತಾರಕರತ್ನ ಅವರಿಗೆ ಶುಕ್ರವಾರ ತೀವ್ರ ಹೃದಯಾಘಾತವಾಗಿದ್ದು, ಅವರನ್ನು ಕುಪ್ಪಂನ ಪಿಇಎಸ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಸ್ಥಳಾಂತರ ಮಾಡಲಾಗಿದೆ.

ತಾರಕರತ್ನ ಅವರು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರ ಯುವ ಗಲಮ್ ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಕುಪ್ಪಂಗೆ ತೆರಳಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕೇಶ್ ಮಸೀದಿಯಿಂದ ಪ್ರಾರ್ಥನೆ ಸಲ್ಲಿಸಿ ಹೊರಬಂದಾಗ ಅಲ್ಲಿ ನೆರೆದಿದ್ದ ಟಿಡಿಪಿ ಕಾರ್ಯಕರ್ತರು ಏಕಾಏಕಿ ಲೋಕೇಶ್ ಕಡೆಗೆ ನುಗ್ಗಿದ್ದು, ಅಲ್ಲಿಯೇ ನಿಂತಿದ್ದ ತಾರಕರತ್ನ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಕುಪ್ಪಂನ ಸಮೀಪದ ಆಸ್ಪತ್ರೆಗೆ ದಾಖಲಿಸಿ ನಂತರ ಪಿಇಎಸ್ ವೈದ್ಯಕೀಯ ಕಾಲೇಜಿಗೆ ರವಾನಿಸಲಾಯಿತು.

ತಾರಕರತ್ನ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಪಿಇಎಸ್ ವೈದ್ಯಕೀಯ ಕಾಲೇಜು ವೈದ್ಯರ ಸಲಹೆಯಂತೆ ಉತ್ತಮ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ ಎಂದು ವೈದ್ಯರೊಂದಿಗೆ ಸಂಪರ್ಕದಲ್ಲಿರುವ ನಟ ಮತ್ತು ಹಿಂದೂಪುರ ಶಾಸಕ ನಂದಮೂರಿ ಬಾಲಕೃಷ್ಣ ಹೇಳಿದ್ದಾರೆ.

ಈ ಮಧ್ಯೆ, ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ವೈದ್ಯರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ತಾರಕರತ್ನ ಅವರ ಆರೋಗ್ಯ ಸ್ಥಿತಿ ವಿಚಾರಿಸಿದ್ದಾರೆ. ಮೊದಲ ದಿನ ಪಾದಯಾತ್ರೆ ಮುಗಿಸಿದ ಲೋಕೇಶ್ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ತಾರಕರತ್ನ ಅವರ ಸ್ಥಿತಿಗತಿ ವಿಚಾರಿಸಿದರು. ನಂತರ ರಾತ್ರಿ ತಾರಕರತ್ನ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರಿಸಲಾಯಿತು. ಐಸಿಯು ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular