HomeBusinessರೈತರಿಗೆ ಮತ್ತೊಂದು ಗುಡ್ ನ್ಯೂಸ್: 11,750 ರೂ. ಬೆಂಬಲ ಬೆಲೆ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿಗೆ...

ರೈತರಿಗೆ ಮತ್ತೊಂದು ಗುಡ್ ನ್ಯೂಸ್: 11,750 ರೂ. ಬೆಂಬಲ ಬೆಲೆ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿಗೆ ಆದೇಶ

ಬೆಂಗಳೂರು: ಕೇಂದ್ರ ಸರ್ಕಾರದ ಪ್ರಸಕ್ತ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಮಾರ್ಗಸೂಚಿಗಳನ್ವಯ 7 ಜಿಲ್ಲೆಗಳಲ್ಲಿ ಉಂಡೆ ಕೊಬ್ಬರಿ ಖರೀದಿಗೆ ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿ ಆದೇಶ ಹೊರಡಿಸಿದೆ.

ತುಮಕೂರು, ಹಾಸನ, ಚಿಕ್ಕಮಗಳೂರು ಮೊದಲಾದ 7 ಜಿಲ್ಲೆಗಳ ರೈತರಿಂದ ಉಂಡೆ ಕೊಬ್ಬರಿ ಖರೀದಿಸಲು ಷರತ್ತುಬದ್ಧ ಅನುಮತಿ ನೀಡಲಾಗಿದೆ. ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನಲ್ಲಿ ಎಫ್ಎಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಗೆ ಕ್ವಿಂಟಲ್ ಗೆ 11,750 ರೂ. ಬೆಂಬಲ ಬೆಲೆ ನಿಗದಿಪಡಿಸಿದ್ದು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ತುಮಕೂರು ಜಿಲ್ಲೆಗಳ ರೈತರಿಂದ ಗರಿಷ್ಠ 54,750 ಮೆಟ್ರಿಕ್ ಟನ್ ಉಂಡೆ ಕೊಬ್ಬರಿ ಖರೀದಿಸಲು ಅನುಮತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಫೆಡ್, ರಾಜ್ಯ ಸರ್ಕಾರ, ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಸಂಸ್ಥೆಯನ್ನು ಖರೀದಿ ಸಂಸ್ಥೆಯನ್ನಾಗಿ ನೇಮಿಸಲಾಗಿದೆ. ರೈತರ ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ, ಖರೀದಿ ಅವಧಿ 6 ತಿಂಗಳವರೆಗೆ ನಿಗದಿಪಡಿಸಲಾಗಿದೆ. ನೋಂದಣಿ ಜೊತೆಗೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಲು ಸೂಚಿಸಲಾಗಿದ್ದು, ಪ್ರತಿ ಎಕರೆಗೆ ಗರಿಷ್ಠ 6 ಕ್ವಿಂಟಲ್ ಮತ್ತು ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್ ಉಂಡೆ ಕೊಬ್ಬರಿ ಖರೀದಿಸಲು ಸೂಚಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular