ಚಿತ್ರದುರ್ಗ: ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಜನವರಿ 28 ರಿಂದ ಫೆಬ್ರವರಿ 5 ರವರೆಗೆ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಯಲಿದೆ.
ಸಿರಿಗೆರೆ ತರಳಬಾಳು ಶ್ರೀಗಳಾದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ 9 ದಿನ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಯಲಿದೆ. ಶ್ರೀಗಳು ಸಿರಿಗೆರೆಯಿಂದ ಹೊರಟು ಜಗಳೂರು, ಉಜ್ಜಯಿನಿ ಮಾರ್ಗವಾಗಿ ಪುರ ಪ್ರವೇಶ ಮಾಡಲಿದ್ದಾರೆ.
ಶನಿವಾರ ಸಂಜೆ 6 ಗಂಟೆಗೆ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಧಾರ್ಮಿಕ ಮುಖಂಡರ ಆಶೀರ್ವಚನ, ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಕೃಷಿ, ಮಹಿಳೆ, ಯುವಕರು, ಮಠಾಧೀಶರು, ಸಾಹಿತ್ಯ ಚಿಂತನಾ ಗೋಷ್ಠಿಗಳಲ್ಲಿ ವಿಚಾರ ಮಂಥನ ನಡೆಯಲಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ 4ರಂದು ರಾಜ್ಯಪಾಲ ಗೆಹ್ಲೊಟ್, ಫೆಬ್ರವರಿ 5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ದೇಶ ಸೇವೆಯಲ್ಲಿ ಹುತಾತ್ಮರಾದ ಕರ್ನಾಟಕದ 10 ವೀರ ಯೋಧರ ಕುಟುಂಬಕ್ಕೆ ಧನಸಹಾಯ ನೀಡಲಾಗುವುದು.