HomeKarnatakaBIG NEWS: ಭ್ರಷ್ಟಾಚಾರ ಆರೋಪ; ಮಂಗಳೂರು ಪೊಲೀಸ್ ಆಯುಕ್ತರಿಗೆ ಲೋಕಾಯುಕ್ತ ನೋಟೀಸ್

BIG NEWS: ಭ್ರಷ್ಟಾಚಾರ ಆರೋಪ; ಮಂಗಳೂರು ಪೊಲೀಸ್ ಆಯುಕ್ತರಿಗೆ ಲೋಕಾಯುಕ್ತ ನೋಟೀಸ್

ಮಂಗಳೂರು: ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ.

ಫೆಬ್ರವರಿ 14ರೊಳಗೆ ತನಿಖಾ ವರದಿ ನೀಡಿ, ವಿಚಾರಣೆಗೆ ಹಾಜರಾಗುವಂತೆ ಕಮಿಷ್ನರ್ ಶಶಿಕುಮಾರ್ ಅವರಿಗೆ ನೋಟೀಸ್ ನೀಡಲಾಗಿದೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್, ಎಸ್ ಐ ಪ್ರದೀಪ್ ವಿರುದ್ಧ ದೂರು ದಾಖಲಾಗಿದೆ. ಸಮಾಜಿಕ ಕಾರ್ಯಕರ್ತ ಮೊಹಮ್ಮದ್ ಕಬೀರ್ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ದೂರು ಆಧರಿಸಿ ಮಂಗಳೂರು ಪೊಲೀಸ್ ಆಯುಕ್ತರಿಗೆ ಲೋಕಾಯುಕ್ತರು ನೋಟೀಸ್ ಜಾರಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular