ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ಆರ್ಥಿಕ ನೆರವು ಪಡೆದುಕೊಳ್ಳಲು ಇ- ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಇ-ಕೆವೈಸಿ ಮಾಡಿಸಲು ಬಾಕಿ ಇರುವ ರೈತರು ಕೂಡಲೇ ಮಾಡಿಸಿಕೊಳ್ಳಲು ಕೋರಲಾಗಿದೆ.
ಪಿಎಂ ಕಿಸಾನ್ ಯೋಜನೆ ಅಡಿಯ ಆರ್ಥಿಕ ನೆರವಿಗೆ ಹೊಸ ನೋಂದಣಿ ಹಾಗೂ ಇ -ಕೆವೈಸಿ ಮಾಡಿಸಿಕೊಳ್ಳುವಂತೆ ರೈತರಿಗೆ ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಪೋರ್ಟಲ್ ನಲ್ಲಿ ಫಾರ್ಮರ್ಸ್ ಕಾರ್ನರ್ ನಲ್ಲಿ ಒಟಿಪಿ ಆಧಾರಿತ ಇ-ಕೆವೈಸಿ ಮಾಡಬಹುದಾಗಿರುತ್ತದೆ. ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿಯನ್ನು ನಾಗರಿಕ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಲ್ಲಿ ಮಾಡಿಸಬಹುದಾಗಿದೆ.
ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಸಮಸ್ಯೆಯಿಂದ ಆರ್ಥಿಕ ನೆರವು ವರ್ಗಾವಣೆಯಾಗದ ರೈತರು ತಮ್ಮ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಲು ಕೋರಲಾಗಿದೆ.
ದಿನಾಂಕ 01.02.2019ರ ನಂತರ ಪೌತಿ ಕಾರಣದಿಂದ ಭೂಹಿಡುವಳಿ ಮಾಲೀಕತ್ವ ಪಡೆದ ರೈತರು ಪಿಎಂ ಕಿಸಾನ್ ಯೋಜನೆಯಡಿ ನೋದಾಯಿಸಿಕೊಳ್ಳಲು ಅರ್ಹರಾಗಿರುತ್ತಾರೆ. ಜಂಟಿ ಖಾತೆದಾರರಾಗಿದ್ದಲ್ಲಿ ಫ್ರೂಟ್ಸ್(FRUTTS) ನಲ್ಲಿ ಎಲ್ಲಾ ಖಾತೆದಾರರು ತಮ್ಮ ಪಾಲಿನ ಜಮೀನಿನ ವಿಸ್ತೀರ್ಣ ಸೇರ್ಪಡೆ ಮಾಡಿಸಲು ಕ್ರಮ ಕೈಗೊಂಡು ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಲು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆ ಕಚೇರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ವಿನಂತಿಸಲಾಗಿದೆ.