HomeEntertainmentBIG NEWS: ಕನ್ನಡ ಚಿತ್ರರಂಗದ ಹಿರಿಯ ನಟ ಮಂದೀಪ್ ರಾಯ್ ಇನ್ನಿಲ್ಲ

BIG NEWS: ಕನ್ನಡ ಚಿತ್ರರಂಗದ ಹಿರಿಯ ನಟ ಮಂದೀಪ್ ರಾಯ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮಂದೀಪ್ ರಾಯ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.

ಬೆಂಗಳೂರಿನ ಕಾವಲ್ ಭೈರಸಂದ್ರದ ನಿವಾಸದಲ್ಲಿ ನಿನ್ನೆ ತಡ ರಾತ್ರಿ 1:45ರ ಸುಮಾರಿಗೆ ಹೃದಯಾಘಾತದಿಂದ ನಿಧನಾರಾಗಿದ್ದಾರೆ. ಮಂದೀಪ್ ರಾಯ್ ಅವರು ಡಾ.ರಾಜ್ ಕುಮಾರ್, ಶಂಕರ್ ನಾಗ್, ವಿಷ್ಣುವರ್ಧನ್, ಪುನೀತ್ ರಾಜ್ ಕುಮಾರ್ ಸೇರಿದಂತೆ ಹಲವು ದಿಗ್ಗಜ ನಟರೊಂದಿಗೆ ಅಭಿನಯಿಸಿದ್ದರು.

500ಕ್ಕೂ ಹೆಚ್ಚು ಸಿನಿಮಗಳಲ್ಲಿ ಅಭಿನಯಿಸಿದ್ದ ಮಂದೀಪ್ ರಾಯ್ ಇದೀಗ ವಿಧಿವಶರಾಗಿದ್ದು, ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಇಂದು ಬೆಳಿಗ್ಗೆ 11ಗಂಟೆಗೆ ಹೆಬ್ಬಾಳ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮಂದೀಪ್ ರಾಯ್ ಪುತ್ರಿ ಅಕ್ಷತಾ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular