HomeKarnatakaBIG NEWS: ಮಂತ್ರಾಲಯಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ ದಂಪತಿ; ಗುರುರಾಯರ ಮೂಲ ಬೃಂದಾವನಕ್ಕೆ...

BIG NEWS: ಮಂತ್ರಾಲಯಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ ದಂಪತಿ; ಗುರುರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ

ರಾಯಚೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಪತ್ನಿ ಅನಿತಾ ಕುಮಾರಸ್ವಾಮಿ ಮಂತ್ರಾಲಯಕ್ಕೆ ಭೇಟಿ ನೀಡಿ ಗುರುರಾಯರ ದರ್ಶನ ಪಡೆದಿದ್ದಾರೆ.

ಮಂತ್ರಾಲಯದಲ್ಲಿ ಕುಮಾರಸ್ವಾಮಿ ದಂಪತಿ ಗುರುರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇದಕ್ಕೂ ಮುನ್ನ ಮಂಚಾಲಮ್ಮ ದೇವಿಗೆ ವಿಶೇಷ ಪೂಜೆ ನೆರವೇರಿಸಿದರು. ನಂತರ ಗುರುರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನದ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಪೀಠಾಧಿಪತಿ ಸುಬುಧೇಂದ್ರ ತೀರ್ಥರ ಆಶೀರ್ವಾದ ಪಡೆದರು. ಈ ವೇಳೆ ಫೆಬ್ರವರಿಯಲ್ಲಿ ನಡೆಯಲಿರುವ ಗುರುಭಕ್ತೋತ್ಸವಕ್ಕೆ ಆಗಮಿಸುವಂತೆ ಹೆಚ್.ಡಿ.ಕೆ ದಂಪತಿಗೆ ಶ್ರೀಗಳು ಆಹ್ವಾನ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular