HomeKarnatakaಎತ್ತಿನ ಬಂಡಿ ಏರಿದ ಮಾಜಿ ಸಿಎಂ BSY; ಬಿಜೆಪಿ ರೈತ ಮೋರ್ಚಾ ಶೋಭಾಯಾತ್ರೆಗೆ ಯಡಿಯೂರಪ್ಪ ಚಾಲನೆ

ಎತ್ತಿನ ಬಂಡಿ ಏರಿದ ಮಾಜಿ ಸಿಎಂ BSY; ಬಿಜೆಪಿ ರೈತ ಮೋರ್ಚಾ ಶೋಭಾಯಾತ್ರೆಗೆ ಯಡಿಯೂರಪ್ಪ ಚಾಲನೆ

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಬಿಜೆಪಿ ರೈತ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರೈತ ಮೋರ್ಚಾ ಶೋಭಾ ಯಾತ್ರೆಗೆ ಚಾಲನೆ ನೀಡಿದರು.

ಬಿಜೆಪಿ ರೈತ ಮೋರ್ಚಾ ಕಾರ್ಯಕಾರಿಣಿ ಸಭೆ ಹಿನ್ನೆಲೆಯಲ್ಲಿ ಬೆಳಗಾವಿಯ ಕಿಲ್ಲಾ ಕೆರೆಯಿಂದ ಮಾಜಿ ಸಿಎಂ ಯಡಿಯೂರಪ್ಪ ಶೋಭಾ ಯಾತ್ರೆಗೆ ಚಾಲನೆ ನೀಡಿದರು. ಕಿಲ್ಲಾ ಕೆರೆಯಿಂದ ಮಯೂರ ಪ್ರೆಸಿಡೆನ್ಸಿ ಕ್ಲಬ್ ವರೆಗೆ ಶೋಭಾ ಯಾತ್ರೆ ನಡೆಯುತ್ತಿದೆ. ಶೋಭಾ ಯಾತ್ರೆಗೂ ಮುನ್ನ ಯಡಿಯೂರಪ್ಪ ದುರ್ಗಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಾಥ್ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಶೋಭಾಯಾತ್ರೆಗೆ ಚಾಲನೆ ನೀಡಿದ ಯಡಿಯೂರಪ್ಪ ಹಸಿರು ಶಾಲು ಹೊದ್ದು, ಎತ್ತಿನ ಬಂಡಿಯೇರಿ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ರೈತಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ರಾಜ್ ಕುಮಾರ್ ಚಹರ್, ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ರೈತ ಮೋರ್ಚಾ ರಾಜ್ಯ ಘಟಕ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಶೋಭಾ ಯಾತ್ರೆಯಲ್ಲಿ ಭಾಗಿಯಾಗಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular