BIG NEWS: ಸಿದ್ದರಾಮಯ್ಯ, HDKಯಿಂದ ಮೊಸರಲ್ಲಿ ಕಲ್ಲು ಹುಡುಕುವ ಯತ್ನ; ರಾಹುಲ್ ಗಾಂಧಿ ವಿರುದ್ಧವೂ ವ್ಯಂಗ್ಯವಾಡಿದ ಸಚಿವ ಕಾರಜೋಳ

ಬಾಗಲಕೋಟೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅನಗತ್ಯವಾಗಿ ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಕಾರಜೋಳ, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಬಿಡಬೇಕು. ಇವರಿಬ್ಬರು ಏನು ಸಾಧನೆ ಮಾಡಿದ್ದಾರೆ? ಜನ ಯಾಕೆ ನಿಮ್ಮಿಬ್ಬರನ್ನು ತಿರಸ್ಕರಿಸಿದರು? ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯನವರಂತಹ ರಾಜ್ಯ ನಾಯಕರು ಕ್ಷೇತ್ರ ಹುಡುಕಾಟ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮಾತ್ರವಲ್ಲ ರಾಹುಲ್ ತಾತ, ಮುತ್ತಾತ ಗೆದ್ದಿದ್ದ ಕ್ಷೇತ್ರಗಳಲ್ಲಿಯೂ ಸೋತು ಸುಣ್ಣ ಆಗಿದ್ದಾರೆ. ಓಡಿಬಂದು ರಾಹುಲ್ ಗಾಂಧಿ ಕೇರಳದಲ್ಲಿ ನೆಲೆ ಕಂಡುಕೊಂಡಿದ್ದಾರೆ ಈ ಬಾರಿ ಕೇರಳದವರೂ ರಾಹುಲ್ ಗಾಂಧಿಗೆ ವೋಟ್ ಹಾಕಲ್ಲ. ರಾಹುಲ್ ಗಾಂಧಿ ಅಜ್ಜ ಕಟ್ಟಿಸಿದ ಮನೆಗೆ ಹೋಗ್ತಾರೆ ಎಂದು ವ್ಯಂಗ್ಯವಾಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read