ಮಂಡ್ಯ: ಕಬ್ಬು ಕಟಾವು ಮಾಡುತ್ತಿದ್ದ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿದ್ದು, ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದ ಬಳಿ ನಡೆದಿದೆ.
ಚಿರತೆ ದಾಳಿಗೊಳಗಾದ ವ್ಯಕಿಯನ್ನು ಭದ್ರಾವತಿ ಮೂಲದ ಜಯರಾಮ್ ಎಂದು ಗುರುತಿಸಲಾಗಿದೆ. ಚಿರತೆ ದಾಳಿಯಿಂದ ಜಯರಾಮ್ ಮುಖ ಹಾಗೂ ಮೈಗೆ ಗಂಭೀರವಾಗಿ ಗಾಯಗಳಾಗಿದ್ದು, ಜಯರಾಮ್ ನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿರತೆ ದಾಳಿಯಿಂದಾಗಿ ರಾಯಸಮುದ್ರ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.