
ಬೆಳಗಾವಿಯಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ಆಡಿಯೋ ಬಿಡುಗಡೆ ಮಾಡಿದ ರಮೇಶ್ ಜಾರಕಿಹೊಳಿ, ಇಂತಹ 20 ಆಡಿಯೋಗಳು ನನ್ನ ಬಳಿ ಇವೆ. ನಾನು ಏನಾದರೂ ಮಾತನಾಡಿದರೆ ಅದನ್ನು ಮಾಡಿಯೇ ತೀರುತ್ತೇನೆ. ಡಿ.ಕೆ. ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸುತ್ತೇನೆ ಎಂದು ಹೇಳಿದ್ದಾರೆ.
ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ, ಹಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಸಿಡಿ ಇಟ್ಟುಕೊಂಡು ಡಿಕೆಶಿ ಬ್ಲ್ಯಾಕ್ ಮೇಲ್ ರಾಜಕಾರಣ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಮುಂದೆ ಸಿದ್ದರಾಮಯ್ಯನಂತವರೇ ಮಾತನಾಡಲು ಆಗಲ್ಲ, ಎಲ್ಲರನ್ನೂ ಸಿಡಿ ಮೂಲಕವೇ ಆಪರೇಟ್ ಮಾಡ್ತಾರೆ. ಡಿ.ಕೆ.ಶಿವಕುಮಾರ್ ಸಿಡಿ ಗ್ಯಾಂಗ್ ಕ್ಯಾಪ್ಟನ್. ಇಂತಹ ಫ್ರಾಡ್ ಇಟ್ಕೊಂಡು ಕಾಂಗ್ರೆಸ್ ನವರು ರಾಜಕೀಯ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕನಕಪುರದಲ್ಲಿ ಡಿ.ಕೆ. ಶಿವಕುಮಾರ್ ಬ್ಲ್ಯೂ ಫಿಲ್ಮ್ ತೋರಿಸುತ್ತಿದ್ದರು. 100 ರೂಪಾಯಿ ಕೊಟ್ಟು ಬ್ಲ್ಯೂ ಫಿಲ್ಮ್ ತೋರಿಸುತ್ತಿದ್ದರು ಎಂದು ಆರೋಪಿಸಿರುವ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಅವರನ್ನು ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

