HomeLatest Newsಎಲ್ಲಾ ಮಾದರಿಯ ಕ್ರಿಕೆಟ್ ಗೆ ಮುರಳಿ ವಿಜಯ್ ನಿವೃತ್ತಿ ಘೋಷಣೆ

ಎಲ್ಲಾ ಮಾದರಿಯ ಕ್ರಿಕೆಟ್ ಗೆ ಮುರಳಿ ವಿಜಯ್ ನಿವೃತ್ತಿ ಘೋಷಣೆ

ಟೀಂ ಇಂಡಿಯಾದ ಹಿರಿಯ ಕ್ರಿಕೆಟಿಗ ಮುರಳಿ ವಿಜಯ್ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ವಿಜಯ್ ಒಟ್ಟು 87 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದು, 4490 ರನ್ ಗಳಿಸಿದ್ದಾರೆ. ಅವರು 61 ಟೆಸ್ಟ್ ಪಂದ್ಯಗಳಲ್ಲಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ಮೂಲಕ 38.29 ಸರಾಸರಿಯಲ್ಲಿ 3982 ರನ್ ಗಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತ ತಂಡಕ್ಕಾಗಿ 17 ODI ಮತ್ತು 9 T20I ಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಿವೃತ್ತಿ ಬಗ್ಗೆ ಟ್ವಿಟರ್‌ನಲ್ಲಿ ಹೃದಯಸ್ಪರ್ಶಿ ಪೋಸ್ಟ್ ಹಾಕಿರುವ ವಿಜಯ್ ಅವರು ಹೊಸ ಅವಕಾಶಗಳನ್ನು ಅನ್ವೇಷಿಸಲು ಮುಕ್ತವಾಗಿದ್ದಾರೆ ಎಂದು ಖಚಿತಪಡಿಸಿದ್ದಾರೆ.

ತಮ್ಮ ಪೋಸ್ಟ್ ನಲ್ಲಿ 2002 ರಿಂದ 2018 ರವರೆಗಿನ ತಮ್ಮ ವೃತ್ತಿಜೀವನವನ್ನು ನೆನಪಿಸಿಕೊಂಡಿರುವ ಅವರು ತಮ್ಮ ವೃತ್ತಿ ಬದುಕಿನ ಪ್ರಯಾಣದ ಭಾಗವಾಗಿರುವ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular