
ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಳೆದ ವರ್ಷದ ಅಕ್ಟೋಬರ್ ನಲ್ಲಿ ಯೋಜನೆಯೊಂದನ್ನು ಆರಂಭಿಸಿದ್ದು, ಅಪಘಾತ ಸಂಭವಿಸಿದ ವೇಳೆ ತುರ್ತು ಅವಧಿಯೊಳಗೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಜೀವ ಉಳಿಸಲು ನೆರವಾಗುವ ಉತ್ತಮ ನಾಗರಿಕರಿಗೆ ನಗದು ಬಹುಮಾನ ನೀಡಲಾಗುತ್ತದೆ. ಇದೀಗ ಈ ಯೋಜನೆಯನ್ನು 2026 ರ ಮಾರ್ಚ್ 31 ರವರೆಗೆ ಮುಂದುವರಿಸಲಾಗಿದೆ.
ಸಮಯ ಪ್ರಜ್ಞೆ ಮೆರೆದು ಅಪಘಾತ ಸಂತ್ರಸ್ತರಿಗೆ ನೆರವಾಗುವವರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು 5,000 ನಗದು ಬಹುಮಾನ ಹಾಗೂ ಪ್ರಶಂಸಾ ಪತ್ರ ನೀಡುತ್ತಿದ್ದು, ರಾಷ್ಟ್ರಮಟ್ಟದಲ್ಲಿ 10 ಮಂದಿಯನ್ನು ಪರಿಗಣಿಸಲಾಗುತ್ತದೆ. ಇವರುಗಳಿಗೆ ತಲಾ ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಿದ್ದು, ಹೆಚ್ಚಿನ ಮಾಹಿತಿಗೆ https://transport.py.gov.in ವೆಬ್ ಸೈಟ್ ವೀಕ್ಷಿಸಬಹುದಾಗಿದೆ.

