ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ, ನಿನ್ನ ಖಾಸಗಿ ವಿಡಿಯೋ ನನ್ನ ಬಳಿ ಇದೆ. ಹಣ ನೀಡದಿದ್ದರೆ ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸುತ್ತೇನೆ ಎಂದು ಬೆದರಿಕೆ ಹಾಕಿದ್ದು ಇದರಿಂದ ಹೆದರಿದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಇಂತಹದೊಂದು ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಅಶೋಕನಗರದಲ್ಲಿ ನಡೆದಿದ್ದು, ಬೆಳ್ತಂಗಡಿಯ ಕಾಲೇಜಿನಲ್ಲಿ ಎರಡನೇ ವರ್ಷದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ಹರ್ಷಿತ್ ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ.
11,000 ನಗದು ನೀಡುವಂತೆ ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ್ದ ಎನ್ನಲಾಗಿದ್ದು, ಇದನ್ನು ಹೊಂದಿಸಲು ಸಾಧ್ಯವಾಗದ ಹರ್ಷಿತ್ ಜನವರಿ 24ರ ಮಧ್ಯಾಹ್ನದ ಬಳಿಕ ವಿಷ ಸೇವಿಸಿದ್ದ. ಆತನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.