ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅಕ್ಕನ ಪತಿ ಶರತ್ ಚಂದ್ರ ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ತಮಗೆ ಅವಕಾಶ ಸಿಗುವುದಿಲ್ಲವೆಂಬುದು ಖಾತ್ರಿಯಾಗುತ್ತಿದ್ದಂತೆ ಪಕ್ಷ ತೊರೆದಿದ್ದಾರೆ.
ಶರತ್ ಚಂದ್ರ ಇದೀಗ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಸೇರ್ಪಡೆಯಾಗಿದ್ದು, ದಿಢೀರ್ ಆಗಿ ನಡೆದಿರುವ ಈ ಬೆಳವಣಿಗೆ ಡಿ.ಕೆ. ಶಿವಕುಮಾರ್ ಅವರಿಗೆ ಇರಿಸುಮುರಿಸನ್ನುಂಟು ಮಾಡಿದೆ.
ಇತರೆ ಪಕ್ಷಗಳಿಂದ ಮುಖಂಡರು ಹಾಗೂ ಕಾರ್ಯಕರ್ತರನ್ನು ಕಾಂಗ್ರೆಸ್ ಗೆ ಕರೆ ತರಲು ಪ್ರಯತ್ನ ನಡೆಯುತ್ತಿರುವ ಮಧ್ಯೆ ಡಿ.ಕೆ. ಶಿವಕುಮಾರ್ ಅವರ ಭಾವ ಶರತ್ ಚಂದ್ರ ಪಕ್ಷ ತೊರೆದಿದ್ದಾರೆ.