HomeLatest Newsರಿಷಿಕೇಶದ ಆಶ್ರಮಕ್ಕೆ ತೆರಳಿ ದೇವರ ಆಶೀರ್ವಾದ ಪಡೆದ ವಿರಾಟ್ - ಅನುಷ್ಕಾ; ಫೋಟೋ ವೈರಲ್

ರಿಷಿಕೇಶದ ಆಶ್ರಮಕ್ಕೆ ತೆರಳಿ ದೇವರ ಆಶೀರ್ವಾದ ಪಡೆದ ವಿರಾಟ್ – ಅನುಷ್ಕಾ; ಫೋಟೋ ವೈರಲ್

ಟೀಮ್ ಇಂಡಿಯಾದ ಖ್ಯಾತ ಆಟಗಾರ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮ ಆಧ್ಯಾತ್ಮಿಕ ಪ್ರವಾಸ ಕೈಗೊಂಡಿದ್ದಾರೆ. ದಂಪತಿ ಇತ್ತೀಚೆಗೆ ರಿಷಿಕೇಶಕ್ಕೆ ತೆರಳಿ ದೇವರ ಆಶೀರ್ವಾದ ಪಡೆದಿದ್ದು, ಇದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ರಿಷಿಕೇಶದ ಸ್ವಾಮಿ ದಯಾನಂದ ಗಿರಿ ಆಶ್ರಮಕ್ಕೆ ದಂಪತಿ ತೆರಳಿದ್ದು, ಪ್ರಾರ್ಥನೆ ಸಲ್ಲಿಸಿದ್ದಾರೆ. ಇದೆ ವೇಳೆ ಆಶ್ರಮಕ್ಕೆ ಆಗಮಿಸಿದ್ದ ಇತರ ಭಕ್ತರು ಫೋಟೋ ತೆಗೆಸಿಕೊಳ್ಳಲು ಮುಂದಾದಾಗ ನಗುನಗುತ್ತಲೇ ಅವರೊಂದಿಗೆ ಪೋಸ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೆ ವಿರಾಟ್ ಕೊಹ್ಲಿ – ಅನುಷ್ಕಾ ಶರ್ಮ ಆಶ್ರಮದಲ್ಲಿ ಅನ್ನ ಸಂತರ್ಪಣೆಯನ್ನು ನಡೆಸಿದ್ದಾರೆ ಎಂದು ಹೇಳಲಾಗಿದೆ. ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಬಾರ್ಡರ್ ಗವಾಸ್ಕರ್ ಟ್ರೋಫಿ 2023 ಕ್ಕೆ ವಿರಾಟ್ ಕೊಹ್ಲಿ ಸಿದ್ದರಾಗತೊಡಗಿದ್ದು ಅದಕ್ಕೂ ಮುನ್ನ ಪತ್ನಿಯೊಂದಿಗೆ ಆಧ್ಯಾತ್ಮಿಕ ಪ್ರವಾಸ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular