HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಕುಸಿತ; ಸಕ್ರಿಯ ಪ್ರಕರಣಗಳಲ್ಲಿಯೂ ಇಳಿಕೆ

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಕುಸಿತ; ಸಕ್ರಿಯ ಪ್ರಕರಣಗಳಲ್ಲಿಯೂ ಇಳಿಕೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 80 ಜನರಲ್ಲಿ ಮಾತ್ರ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ ದೇಶದಲ್ಲಿ ಇಬ್ಬರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,30,740 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1,755 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,50,289 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 2,82,654 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,48,69,795 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,45,593 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular